Recent Posts

ಕುವೆಂಪು ಅವರ ವಿಶ್ವಮಾನವ ಸಂದೇಶ - Class 9th Second Language Kannada Textbook Solutions

 ಪೂರಕ ಓದು
ಕುವೆಂಪು ಅವರ ವಿಶ್ವಮಾನವ ಸಂದೇಶ

●    ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ.

1.ವಿಶ್ವಮಾನವನಾಗಿ ಹುಟ್ಟುವ ಮಗು ಯಾವ ಯಾವ ಬಂಧನಗಳಿಗೆ ಒಳಪಡುತ್ತದೆ?

ಉತ್ತರ:- ಹುಟ್ಟುವಾಗ 'ವಿಶ್ವಮಾನವ'ನಾಗಿಯೇ ಹುಟ್ಟಿದ ಮಗು, ನಾವು ದೇಶ, ಭಾಷೆ, ಮತ, ಜಾತಿ, ಜನಾಂಗ, ವರ್ಣ ಇತ್ಯಾದಿ ಬಂಧನಗಳಿಗೆ ಒಳಡುತ್ತದೆ.

2. ಸ್ವಾಮಿ ವಿವೇಕಾನಂದರ ಪ್ರಕಾರ ಈ ಜಗತ್ತಿನಲ್ಲಿ ಎಷ್ಟು ಧರ್ಮಗಳಿವೆ?
ಉತ್ತರ:- "ಹುಟ್ಟುವಾಗಲೇ ಯಾರೂ ಯಾವ ಮತಕ್ಕೂ ಸೇರಿರುವುದಿಲ್ಲ. ಪ್ರತಿಯೊಬ್ಬ ಮಾನವನ ಹೃದಯದಲ್ಲೂ ಅವನದೇ ಆದ ವಿವೇಕಾನಂದರು ಧರ್ಮವಿದೆ. ಈ ಜಗತ್ತಿನಲ್ಲಿ ಎಷ್ಟು ಜನ ಮಾನವರಿದ್ದಾರೆಯೋ ಅಷ್ಟು ಧರ್ಮಗಳಿರಲಿ.” ಎಂದು ಸ್ವಾಮಿ ಹೇಳಿದ್ದಾರೆ.

3 ಕುವೆಂಪು ಅವರ ಪ್ರಕಾರ ವಿದ್ಯೆಯ ಕರ್ತವ್ಯವೇನು?
ಉತ್ತರ:- ಪ್ರತಿಯೊಂದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪ ಮಾನವ'ನನ್ನಾಗಿ ಮಾಡುತ್ತೇವೆ. ಮತ್ತೆ ಅವನನ್ನು 'ವಿಶ್ವಮಾನವ'ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು ಎಂದು ಕುವೆಂಪುರವರು ಹೇಳಿದ್ದಾರೆ.

4. ಧರ್ಮಗಳು ಹುಟ್ಟಿಕೊಂಡದ್ದು ಹೇಗೆ?
ಉತ್ತರ:- ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸಂಭವಿಸಿ ಹೋಗಿದ್ದಾರೆ. ಅವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊಂಡಿದೆ. 

5. ಧರ್ಮಗಳು ಉಂಟುಮಾಡಿರುವ ತೊಂದರೆಗಳೇನು?
ಉತ್ತರ:- ಮಾನವರನ್ನು ಕೂಡಿಸಿ ಬಾಳಿಸಬೇಕೆಂಬ ಸದುದ್ದೇಶದಿಂದ ಹುಟ್ಟಿಕೊಂಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒಂದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊಂದು ಹೊಸ ಧರ್ಮಕ್ಕೆ ಎಡೆಗೊಟ್ಟುದೂ ಉಂಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗುಂಪು ಗುಂಪಾಗಿ ಒಡೆದಿವೆ. ಯುದ್ಧಗಳನ್ನು ಹೊತ್ತಿಸಿವೆ.

6. ವಿನೋಭಾಭಾವೆಯವರು ಮತಧರ್ಮದ ಬಗ್ಗೆ ಏನು ಹೇಳಿದ್ದಾರೆ?
ಉತ್ತರ:- ವಿನೋಬಾಭಾವೆಯವರು ಹಿಂದೆ ಹೇಳಿದಂತೆ 'ಮತ ಮತ್ತು ರಾಜಕೀಯದ ಕಾಲ ಆಗಿ ಹೋಯಿತು. ಇನ್ನೇನಿದ್ದರೂ ಅಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ'

7. ಕುವೆಂಪು ಅವರ ಪಂಚ ಮಂತ್ರಗಳಾವುವು?
ಉತ್ತರ:- ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ-ಈ ಪಂಚಮಂತ್ರ ಇವು ಕುವೆಂಪುರವರ ಪಂಚ ಮಂತ್ರಗಳಾಗಿವೆ. 

8.ಕುವೆಂಪು ಅವರ ವಿಶ್ವಮಾನವ ಸಂದೇಶದ ಸಾರವೇನು?
ಉತ್ತರ:- ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅಂತಹ ಭಾವನೆ ಅಂತಹ ದೃಷ್ಟಿ ಬರಿಯ ಯಾವುದೊ ಒಂದು ಜಾತಿಗೆ, ಮತಕ್ಕೆ ಗುಂಪಿಗೆ, ಒಂದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ: ಸರ್ವ ಕಾಲಕ್ಕೂ ಅನ್ವಯವಾಗುವ ಇವು ಮೂಲ ಮೌಲ್ಯಗಳು, ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗುಂಪುಗಾರಿಕೆಗೆಂದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ: ವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೋ ಅಷ್ಟೂ ಸಂಖ್ಯೆಯ ಮತಗಳಿರುವುದು ಸಾಧ್ಯ: ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾಧಕವಾಗುವುದೂ ಸಾಧ್ಯ ಈ 'ದರ್ಶನ'ವನ್ನೇ 'ವಿಶ್ವಮಾನವ ಗೀತೆ' ಸಾರುತ್ತದೆ.

9, ವಿಶ್ವಮಾನವಾಗಲು ನಾವು ಅನುಸರಿಸಬೇಕಾದ ಸಪ್ತ ಸೂತ್ರಗಳಾವುವು?
ಉತ್ತರ:- ವಿಶ್ವಮಾನವಾಗಲು ನಾವು ಸಾಧಿಸಬೇಕಾದ ಮೂಲಭೂತ ಸ್ವರೂಪದ ಸಪ್ತ ಸೂತ್ರಗಳು,
1. “ಮನುಷ್ಯಜಾತಿ ತಾನೊಂದೆ ವಲಂ" ಎಂಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
2. ವರ್ಣಾಶ್ರಮವನ್ನು ತಿದ್ದುವುದಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ, ಅಂತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟೆಂಟ್, ಸಿಖ್, ನಿರಂಕಾರಿ, ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
3, ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿ ಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ ವಿನಾಶಗೊಳಿಸಬೇಕು.
4. 'ಮತ' ತೊಲಗಿ 'ಆಧ್ಯಾತ್ಮ' ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು.
5. ಮತ 'ಮನುಜಮತ' ಆಗಬೇಕು. ಪಥ 'ವಿಶ್ವಪಥ' ಆಗಬೇಕು; ಮನುಷ್ಯ 'ವಿಶ್ವಮಾನವ' ಆಗಬೇಕು.
6.ಮತ ಗುಂಪು ಕಟ್ಟುವ ವಿಷಯವಾಗಬಾರದು. ಯಾರೂ ಯಾವ ಮತಕ್ಕೂ ಸೇರದೆ,
ಪ್ರತಿಯೊಬ್ಬನೂ ತಾನು ಕಂಡುಕೊಳ್ಳುವ 'ತನ್ನ ಮತಕ್ಕೆ ಮಾತ್ರ ಸೇರಬೇಕು. ಅಂದರೆ ಜಗತ್ತಿನಲ್ಲಿ ವ್ಯಕ್ತಿಯೂ ತನಗೆ ಸಾಧ್ಯವಾದುವುಗಳನೆಲ್ಲ ಓದಿ ತಿಳಿದು ತನ್ನ 'ದರ್ಶನ'ವನ್ನು ತಾನೆ ನಿರ್ಣಯಿಸಿ ಕಟ್ಟಿಕೊಳ್ಳಬೇಕು.
ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗುಂಪುಕಟ್ಟೆ ಜಗಳ ಹಚ್ಚುವು ತಳಿಗಬಾರದು.
7. ಯಾವ ಒಂದು ಗ್ರಂಥವೂ 'ಏಕೈಕ ಪರಮಪೂಜ್ಯ' ಧರ್ಮ ಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾದ್ಯವಾಡುವುಗಳನ್ನೆಲ್ಲ ಓದಿ ತಿಳಿದು ತನ್ನ ದರ್ಶನ ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು.

You Might Like

Post a Comment

0 Comments